
ಪ್ರಗತಿವಾಹಿನಿ ಸುದ್ದಿ :ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರಿನ ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ವರದಕ್ಷಿಣೆ ಕಿರುಕುಳವೇ ಘಟನೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾಳೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾಗೆ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.