
ಅವಶೇಷಗಳಡಿ ಸಿಲುಕಿ ಮೂವರು ಸಾವು
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಾಖಂಡದ ಚಮೋಲಿಯಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಸಿಲುಕಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ.
ಮಹಿಳೆಯ ಪತಿ ಕನ್ವರ್ ಸಿಂಗ್ ಅವರನ್ನು ರಕ್ಷಿಸಲಾಗಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟ, ಭೂಕುಸಿತದಿಂದಾಗಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆ ತನ್ನ ಮಕ್ಕಳಾದ 10 ವರ್ಷದ ವಿಶಾಲ್ ಹಾಗೂ ವಿಕಾಸ್ ನನ್ನು ತಬ್ಬಿಕೊಂಡೇ ಪ್ರಾಣ ಬಿಟ್ಟಿದ್ದಾರೆ. ಮಕ್ಕಳನ್ನು ರಕ್ಷಿಸಲು ತಾಯಿ ಯತ್ನಿಸಿದರೂ ಸಾಧ್ಯವಾಗದೇ ಮೂವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿರಬಹುದು ಎನ್ನಲಾಗಿದೆ.