Latest

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು

ಪ್ರಗತಿವಾಹಿನಿ ಸುದ್ದಿ, ಉಡುಪಿ -ಇಲ್ಲಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮಿಗಳ ಆರೋಗ್ಯದಲ್ಲಿ ಏರು ಪೇರು ಉಂಟಾಗಿದ್ದು, ಇಂದು ಬೆಳಗಿನ ಜಾವ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಶ್ವಾಸಕೋಶದಲ್ಲಿ ಕಫ ತುಂಬಿಕೊಂಡ ಹಿನ್ನೆಲೆಯಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಅಳವಡಿಸಲಾಗಿದೆ. ಈ ಸಂಬಂಧ ಆಸ್ಪತ್ರೆ ಹೆಲ್ತ್ ಬುಲಿಟನ್ ಬಿಡುಗಡೆ ಮಾಡಿದೆ.

Home add -Advt

ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. 

ಶ್ರೀಗಳ ಆರೋಗ್ಯಕ್ಕಾಗಿ  ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ   ಪ್ರಾರ್ಥನೆ ಮಾಡುವಂತೆ ಅವರ ಅಭಿಮಾನಿಗಳು ಭಕ್ತರಲ್ಲಿ ಮನವಿ ಮಾಡಿದ್ದಾರೆ. 

Related Articles

Back to top button