Kannada NewsKarnataka NewsLatest

*ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮಹಿಳೆ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಮಹಿಳೆ ಮಾನಸಿಕ  ಅಸ್ವಸ್ಥತತೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.‌

ಹಾಸನ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿತ್ತು. ಘಟನೆ ಖಂಡಿಸಿ ಭಕ್ತರು, ಸಾರ್ವಜನಿಕರು ದೇವಾಲಯದ ಆಅರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಆರೋಪಿಯನ್ನು ತಕ್ಷಣ ಬಂದಿಸುವಂತೆ ಪಟ್ಟು ಹಿಡಿದಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಟಿವಿ ದೃಶ್ಯವಳಿಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಆಕೆ ಚಿಕ್ಕಮಗಳೂರಿನ ಉಂಡೆದಾಸರಹಳ್ಳಿಯ ನಿವಾಸಿ ಎಂಬುದನ್ನು ಪತ್ತೆಹಚ್ಚಿದ್ದಾರೆ.

ಬಳಿಕ, ಚಿಕ್ಕಮಗಳೂರು ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ನಗರ ಪೊಲೀಸರು ಮತ್ತು ಬಸವನಹಳ್ಳಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆದಗಾ ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. 

Home add -Advt

ಹಾಗಾಗಿ, ಆಕೆಯ ಹೇಳಿಕೆಗಳನ್ನು ಮತ್ತು ಆಕೆಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಘಟನೆ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Articles

Back to top button