*ದಸರಾ ಮಹೋತ್ಸವ: ಚಾಮುಂಡಿ ತಾಯಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಸಚಿವರು, ಬಾನು ಮುಷ್ತಾಕ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅಧಿಕೃ ಚಾಲನೆ ದೊರೆಯಲಿದೆ. ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡಿ ತಾಯಿಗೆ ವಿಶೇಶ ಪೂಜೆ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಹಾಗೂ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದು ದೇವಸ್ಥಾನ ಪ್ರವೇಸಿಸಿದರು.
ಬಳಿಕ ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರು ಹಾಗೂ ದಸರಾ ಉದ್ಘಾತಕ ಲೇಖಕಿ ಬಾನು ಮುಷ್ತಾಕ್ ಉಪಸ್ಥಿತರಿದ್ದರು. ವಿಶೇಷ ಪೂಜೆ ಬಳಿಕ ಸಿಎಂ ಸಿದ್ದರಾಮಯ್ಯ, ದಸರಾ ಉದ್ಘಾಟಕಿ ಬಾನು ಮುಷ್ತಾಕ್, ಸಚಿವರುಗಳಿಗೆ ಫಲತಾಂಬೂಲ ನೀಡಿ, ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು.