Kannada NewsKarnataka News

*ಜಾತಿಗಣತಿ ಭವಿಷ್ಯ ನಾಳೆ ನಿರ್ಧಾರ: ವಿಚಾರಣೆ ಮುಂದೂಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಜಾತಿಗಣತಿ ಆರಂಭವಾಗಿದೆ. ಈ ನಡುವೆ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್ ಅರ್ಜಿ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನಾಳೆ ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಜಾತಿಗಣತಿ ಬಗ್ಗೆ ಹೈಕೋರ್ಟ್ ಯಾವ ಆದೇಶ ನೀಡಲಿದೆ ಎಂಬುದು ನಾಳೆ ಮಧ್ಯಾಹ್ನ ನಿರ್ಧಾರವಾಗಲಿದೆ.

Home add -Advt


Related Articles

Back to top button