
ಪ್ರಗತಿವಾಹಿನಿ ಸುದ್ದಿ: ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ ಹಾಡ ಹಗಲೇ ನಡು ರಸ್ತೆಯಲ್ಲಿಯೇ ದುರುಳನೊಬ್ಬ ಚಾಕು ಇರಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆ ಬಳಿ ಬಸ್ ನಿಲ್ದಾಣದಲ್ಲಿ ಮಹಿಳೆ ಕಚೇರಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ದುಷ್ಕರ್ಮಿಯೊಬ್ಬ ಮಹಿಳೆಯೊಂದಿಗೆ ಗಲಾಟೆ ಮಾಡಿ ಚಾಕು ಇರಿದಿದ್ದಾನೆ.
ಬರೋಬ್ಬರಿ 11 ಬಾರಿ ಚಾಕು ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ.
ರೇಖಾ (35) ಮೃತ ಮಹಿಳೆ. ತುಮಕೂರಿನ ಶಿರಾ ಮುಲದವರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಸುಂಕದಕಟ್ಟೆ ಬಳಿ ಮನೆ ಶಿಫ್ಟ್ ಮಾಡಿದ್ದರು. ಯಾವ ಕಾರಣಕ್ಕಾಗಿ ಮಹಿಳೆಯ ಹತ್ಯೆ ನಡೆದಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.