Kannada NewsKarnataka NewsLatest

*ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಶೀಘ್ರ: ಶೇ.50ರಷ್ಟು ಸಚಿವರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ. ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

Home add -Advt

ನವದೆಹಲಿಯಲ್ಲಿ ಮಾತನಾಡಿದ ಸಲಿಂ ಅಹ್ಮದ್, ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಶೇ.50ರಷ್ಟು ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು. ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.

ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಸಚಿವ ಸಂಪುಟದಿಂದ ಕೈಬಿಡಲಾಗುವ ಸಚಿವರಿಗೆ ಪಕ್ಷದ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Related Articles

Back to top button