Kannada NewsKarnataka NewsPolitics
*ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರ ನೇಮಕ: ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಇಂದಿನಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು.
ಇಂದು ಶಿವಮೋಗ್ಗಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರಣಾಳಿಕೆ ನೀಡಿದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದೆವು ಎಂದು ನುಡಿದರು.
ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದೆ ಎಂದರು.