
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪೋಷಣ ಮಾಸಾಚರಣೆ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಂಡಿಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಚಾಲನೆ ನೀಡಿದರು.
ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಅನ್ನಪ್ರಾಶನ, ಅಕ್ಷರಾಭ್ಯಾಸ, ವೇಷಭೂಷಣ, ಹುಟ್ಟುಹಬ್ಬ, ಪೌಷ್ಟಿಕ ಆಹಾರ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಸಹ ನಡೆದವು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ವೈದ್ಯಾಧಿಕಾರಿಗಳು, ಐಸಿಡಿಎಸ್ ಮೇಲ್ವಿಚಾರಕಿಯರು, ಅಂಗನವಾಡಿ ಸಿಬ್ಬಂದಿ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.