Belagavi NewsBelgaum NewsKannada NewsKarnataka News
*ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 441 ಕೆಜಿ ಗಾಂಜಾ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 441 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸಿಂಗಾಡಿ ಮಾಳಪ್ಪ ಹಿರೇಕೋಡಿ(45) ಎಂಬಾತ ತನ್ನ ಒಂದು ಎಕರೆ ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿ ಹಲವಾರು ದಿನಗಳಿಂದ ಮಹಾರಾಷ್ಟ್ರ ಹಾಗೂ ಬೆಳಗಾವಿ ಗಡಿಭಾಗದಲ್ಲಿ ಗಾಂಜಾ ಸಪ್ಲೈ ಮಾಡ್ತಿದ್ದ ಎನ್ನಲಾಗಿದೆ. ಪೊಲೀಸರು ದಾಳಿ ಮಾಡಿದಾಗ ಅಂದಾಜು 22ಲಕ್ಷ ರೂ ಮೌಲ್ಯದ 441 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಪೊಲೀಸರ ಜಂಟಿ ಕಾರ್ಯಾಚರಣೆಗೆ ಬೆಳಗಾವಿ ಪೊಲೀಸ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.