LatestWorld

*ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಕುಳಿತು ಭಾರತಕ್ಕೆ ಆಗಮಿಸಿದ ಅಪ್ಘಾನ್ ಬಾಲಕ*

ಪ್ರಗತಿವಾಹಿನಿ ಸುದ್ದಿ: ಬಾಲಕನೋರ್ವ ವಿಮಾನದ ಲ್ಯಾಂಡಿಗ್ ಗೇರ್ ನಲ್ಲಿ ಕುಳಿತು ಅಪ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸಿರುವ ಘಟನೆ ಬೆಳಕಿಗೆ ಬಂದಿದೆ.‌

ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕ ಅಫ್ಘಾನಿಸ್ತಾನದ ಕಾಬೂಲ್‌ನಿಂದ  ಭಾನುವಾರ ಬೆಳಿಗ್ಗೆ 11:10 ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡಿಂಗ್‌ ಆದ ಕಾಮ್ ಏರ್‌ಲೈನ್ಸ್‌ನಲ್ಲಿ ಬಾಲಕ ಆಗಮಿಸಿದ್ದಾನೆ.

ವಿಮಾನ ಲ್ಯಾಂಡ್‌ ಆದ ಬಳಿಕ ಟ್ಯಾಕ್ಸಿ ವೇ ಬಳಿ ಬಾಲಕ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆತನನ್ನು ವಶಕ್ಕೆ ಪಡೆದು ಟರ್ಮಿನಲ್ -3 ರಲ್ಲಿ ವಿಚಾರಣೆ ನಡೆಸಿದೆ.  

ವಿಚಾರಣೆ ವೇಳೆ ನಾನು ಕಾಬೂಲ್ ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದೆ. ನಂತರ ಕುತೂಹಲಕ್ಕಾಗಿ ವಿಮಾನದ ಹಿಂಭಾಗದ ಲ್ಯಾಂಡಿಂಗ್ ಗೇರ್ ವಿಭಾಗದೊಳಗೆ ಪ್ರವೇಶಿಸಿದ್ದೆ ಎಂದಿದ್ದಾನೆ. ಆ ಹುಡುಗನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅದೇ ದಿನ ಸಂಜೆ 4 ಗಂಟೆ ಸುಮಾರಿಗೆ ಮತ್ತೊಂದು ವಿಮಾನದ ಮೂಲಕ ಕಾಬೂಲ್‌ಗೆ ಕಳುಹಿಸಲಾಯಿತು  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Home add -Advt

Related Articles

Back to top button