Kannada NewsKarnataka NewsLatestPolitics
*ಮಾಜಿ ಸಚಿವ ಸುರೇಶ್ ಕುಮಾರ್ ಗೆ ಮಾತೃವಿಯೋಗ: ಸುಶೀಲಮ್ಮ ಟೀಚರ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ (92) ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಶಿಕ್ಷಕಿಯಾಗಿದ್ದ ಸುಶೀಲಮ್ಮ ನಿವೃತ್ತಿ ಬಳಿಕ ಬೆಂಗಖೂರಿನ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು. ಒಟ್ಟು 8 ಬಾರಿ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದರು.
ನನ್ನನ್ನು ಹೊತ್ತು, ಹೆತ್ತು, ಸಾಕಿ, ತಿದ್ದಿ ತೀಡಿ ಬೆಳೆಸಿದ್ದ ನನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನಜಾವ ನನ್ನನ್ನು ಬಿಟ್ಟು ಹೊರಟುಬಿಟ್ಟುರು ಎಂದು ಸುರೇ ಕುಮಾರ್ ಕಂಬನಿ ಮಿಡಿದಿದ್ದಾರೆ.