Kannada NewsKarnataka NewsLatest

*ಶಿವಾರ್ಚಕ ನಿಧನ ಹಿನ್ನೆಲೆ: ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಇಂದು ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರು ಚಾಲನೆ ದೊರೆತಿದ್ದು, ಸಂಭ್ರಮ ಸಡಗರ ಮನೆ ಮಾಡಿದೆ. ಈ ನಡುವೆ ಚಾಮುಂಡಿ ಬೆಟ್ಟದ ಶಿವಾರ್ಚಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ದೇವಿ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಭಕ್ತರಿಗೆ ತಾಯಿ ಚಾಮುಂಡಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button