Kannada NewsKarnataka NewsLatest
*ಇಬ್ಬರು ಇನ್ಸ್ ಪೆಕ್ಟರ್, ಓರ್ವ ಎಎಸ್ ಐ ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಹಣ ವಸೂಲಿ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್, ಓರ್ವ ಎ ಎಸ್ ಐ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಚಿನ್ನದ ವ್ಯಾಪಾರಿಯಿಬ್ಬರಿಂದ 10 ಲಕ್ಷ ರೂಪಾಯಿ ವಸೂಲಿ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಹಲಸೂರು ಗೇಟ್ ಠಾಣೆ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಸ್ ಎಸ್ ಐ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನ ಹಲವೆಡೆ ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಲ್ಲಿ ಕೋರಮಂಗಲ ಠಾಣೆ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.