Karnataka NewsLatestPolitics

*ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ

ಪ್ರಗತಿವಾಹಿನಿ ಸುದ್ದಿ: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು.

Home add -Advt

Related Articles

Back to top button