
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಒಂದು ವರ್ಷಗಳ ಅವಧಿಗೆ ಮಹೇಶ್ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.