HealthKannada NewsKarnataka NewsLatest

*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಲಿದೆ.

, ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ. ಅಕ್ಟೋಬರ್ 1, 2025 ರಿಂದ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಯೋಜನೆ ಅನುಷ್ಠಾನವಾಗಲಿದೆ.

ನೌಕರರ ವರ್ಗವಾರು ವಂತಿಗ ಕಡಿತ ವಿವರ :

ಗ್ರೂಪ್ ಎ: 1,000 ರೂ.
ಗ್ರೂಪ್ ಬಿ: 500 ರೂ.
ಗ್ರೂಪ್ ಸಿ: 350 ರೂ.
ಗ್ರೂಪ್ ಡಿ: 250 ರೂ.

Home add -Advt

ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಅನ್ವಯವಾಗಲಿದೆ . ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ. ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ.

ಇದರಿಂದಾಗಿ ಸರಕಾರಿ ನೌಕರರ ಬಹುಕಾಲದ ಬೇಡಿಕೆ ಈಡಾರಿದಂತಾಗಿದೆ.

Related Articles

Back to top button