Belagavi NewsBelgaum NewsKarnataka NewsLatestPolitics

*ಶಾಸಕ ರಾಜು ಕಾಗೆಗೆ ಬಿಗ್ ಶಾಕ್ ನೀಡಿದ ಹೈಕಮಾಂಡ್*

ಪ್ರಗತಿವಾಹಿನಿ ಸುದ್ದಿ: ಪಕ್ಷ ವಿರುದ್ಧವೇ ಧ್ವನಿ ಎತ್ತಿ, ನಾಯಕರ ವಿರುದ್ಧವೇ ಬಹಿರಂಗ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಕಾರಣರಾಗುತ್ತಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೋರ್ವ ಶಾಸಕನಿಗೆ ಹೈಕಮಾಂಡ್ ಶಾಕ್ ನೀಡಿದೆ.

ಕಾಂಗ್ರೆಸ್ ಹಿರಿಯ ನಾಯಕ, ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿ ರವಾನಿಸಿದ್ದಾರೆ.

Home add -Advt


Related Articles

Back to top button