Kannada NewsLatestNationalPolitics

*ಮಹಿಳೆಯರ ಖಾತೆಗೆ 10,000 ರೂಪಾಯಿ ಜಮೆ*

ಮಹಿಳಾ ರೋಜ್ ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮಹಿಳಾ ರೋಜ್ ಗಾರ್ ಯೋಜನೆಗೆ ಚಾಲನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೋಲಕ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಖಾತೆಗೆ 10,000 ರೂಪಾಯಿ ಜಮೆಯಾಗಿದೆ. 7,500 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಸ್ವಯಂ ಉದ್ಯೋಗದ ಮೂಲಕ ಮಹಿಳಾ ಸಬಲೀಕರಣ ಉದ್ದೇಶ ಹೊಂದಿರುವುದಾಗಿ ಎನ್ ಡಿಎ ಸರ್ಕಾರ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಅವರು ಆಯ್ಕೆ ಮಾಡಿಕೊಳ್ಳುವ ಜೀವನೋಪಾಯ ಚಟುವಟಿಕೆಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಯೋಜನೆಯ ಫಲಾನುಭವಿ ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Home add -Advt

Related Articles

Back to top button