
ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಥಾರ್ ಮಹೀಂದ್ರಾ ಜೀಪ್ ಪಲ್ಟಿಯಾಗಿ ಬಿದ್ದಿದ್ದು, ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹರಿಯಾಣದ ಗುರುಗ್ರಾಮದ ರಾಜೀವ್ ಚೌಕ್ ಬಳಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಮಹೀಂದ್ರಾ ಜೀಪ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.