Kannada NewsKarnataka NewsNational

*ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ*

ಪ್ರಗತಿವಾಹಿನಿ ಸುದ್ದಿ : ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಟ್ಬಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹಾಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಕಡಬ ಭರತರಾಜ ಶೆಟ್ಟಿ, ಬೊರಕಟ್ಟೆ ಮುರಳೀಧರ ಪೈ ಮತ್ತು ತ್ಯಾಗರಾಜ ನಾರಾಯಣ ಇನವಳ್ಳಿ ಅವರಿಗೆ ಪದೋನ್ನತಿ ನೀಡಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಸಿಜೆಐ ಬಿ.ಆ‌ರ್.ಗವಾಯಿ ಅಧ್ಯಕ್ಷತೆಯಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿಈ ಮೂವರು ಹಿರಿಯ ನ್ಯಾಯಾಧೀಶರಿಗೆ ತಮ್ಮ ಸೇವಾ ಹಿರಿತನದ ಆಧಾರದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಇದೀಗ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ, ಈವರೆಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ವಿ.ಅರವಿಂದ್ ಅವರ ಸೇವೆಯನ್ನು ಖಾಯಂಗೊಳಿಸಿ ಆದೇಶ ಹೊರಡಿಸಲಾಗಿದೆ.

Home add -Advt

Related Articles

Back to top button