Election NewsKannada NewsKarnataka NewsNationalPolitics
*ನಟ ವಿಜಯ ಸಮಾವೇಶದಲ್ಲಿ ಕಾಲ್ತುಳಿತ: ಮೃತರ ಕುಟುಂಭಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್*

ಪ್ರಗತಿವಾಹಿನಿ ಸುದ್ದಿ: ನಟ ವಿಜಯ ನಡೆಸಿದ ಬೃಹತ್ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿ 38 ಜನ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಹಾಗೂ ಗಾಯಾಳುವಿಗೆ ಸಿಎಂ ಎಂ.ಕೆ.ಸ್ಟಾಲಿನ್ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.
ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರ್ಕಾರ, ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಭಾನುವಾರ ಸ್ಟಾಲಿನ್ ಅವರು ದುರಂತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಿಜಯ್ ದಳಪತಿ ವಿರುದ್ಧ ಕೇಸ್ ದಾಖಲಿಸುವ ಸಾಧ್ಯತೆಯಿದೆ. ಕೇಸ್ ದಾಖಲಿಸಿ ವಿಜಯ್ ದಳಪತಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.