
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ ಉಡುಪಿಯ ಖಾಸಗಿ ಬಸ್ ಸಂಸ್ಥೆಯ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೈಫುದ್ದೀನ್ ದೇಹದ ಹಲವೆಡೆ ಭೀಕರವಾಗಿ ಮಾರಕಾಸ್ತ್ರಗಳಿಂದ ಇರಿದಿದ್ದು ರಕ್ತದ ಮಡುವಿನಲ್ಲಿ ಪ್ರಾಣ ಕಳೆದುಕೊಂಡಿದ್ದ. ಈ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾತನಾಡಿದ ಉಡುಪಿ ಎಸ್ಪಿ ಹರಿರಾಂ ಶಂಕರ್, ಸೈಫುದ್ದೀನ್ ಎಂಬ ರೌಡಿ ಶೀಟರ್ ನನ್ನು ಆತನ ಬಸ್ ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮೂವರು ಆರೋಪಿಗಳೇ ಇರಿದು ಕೊಲೆ ಮಾಡಿದ್ದಾರೆ ಎಂದಿದ್ದಾರೆ.
ರೌಡಿಶೀಟರ್ ಸೈಫುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಬರ್ಬರವಾಗಿ ಕೊಲೆ ಮಾಡಿದೆ. ಉಡುಪಿ ಮಲ್ಪೆ ಕೊಡವೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೈಫುದ್ದೀನ್ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು ಆತನನ್ನು ಭೀಕರವಾಗಿ ಇರಿದು ಕೊಲೆ ಮಾಡಿದೆ.
ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನು ಹತ್ಯೆಯಾದ ಸೈಫುದ್ದೀನ್ ಮೇಲೆ 18 ಕೇಸ್‌ಗಳಿದ್ದು ಉಡುಪಿ, ಹಿರಿಯಡ್ಕ ಠಾಣೆಯಲ್ಲಿ ಈತ ರೌಡಿಶೀಟರ್.