
ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಎರಡು ಕಾರುಗಳ ನಡುವೆ ಭೀಕರಪ ಅಘಾತ ಸಂಭವಿಸಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಕುರುಕ್ಷೇತ್ರ-ಕೈತಾನ್ ರಸ್ತೆಯಲ್ಲಿ ಈ ಘೋರ ದುರಂತ ಸಂಭವಿಸಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುರುಕ್ಷೇತ್ರ ಪೊಲೀಸರು ಭೇಟಿ ನೀಡಿದ್ದಾರೆ.