Kannada NewsKarnataka NewsLatest

*ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟಿಯಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆಯೆ ಹರಿದ ಟಿಪ್ಪರ್: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಸ್ಕೂಟಿಯಲ್ಲಿ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿಯಿಂದಾಗಿ ಸ್ಕೂಟಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ವಿದ್ಯಾರ್ಥಿನಿ ಮೇಲೆ ಹರಿದು ಹೋಗಿದ್ದು, ವಿದ್ಯಾರ್ಥಿನಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.

ಧನುಶ್ರೀ ಮೃತ ವಿದ್ಯಾರ್ಥಿನಿ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಲಾರಿಗೆ ಧನುಶ್ರೀ ಬಲಿಯಾಗಿದ್ದಾಳೆ. ಮೃತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button