
ಪ್ರಗತಿವಾಹಿನಿ ಸುದ್ದಿ: ಯಾವುದೇ ಕ್ಷಣದಲ್ಲಿಯಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಯಾವ ಕ್ಷಣದಲ್ಲಾದರೂ ಸಂಪುಟ ವಿಸ್ತರಣೆಯಾಗಬಹುದು. ಎಲ್ಲವೂ ಹೈಕಮಾಂಡ್ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನೂ ಇಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ. ಅದಕ್ಕೆ ನಾವು ಬದ್ಧ ಎಂದರು.
ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ಇನ್ನು ಹತ್ತು ದಿನಗಳಲ್ಲಿ ನಾಗೇಂದ್ರ ಮತ್ತೆ ಸಚಿವರಾಗಲಿದ್ದಾರೆ ಎಂದು ತಿಳಿಸಿದರು.