
ಇಬ್ಬರು ಆರೋಪಿಗಳು ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 7.80 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ನೈಜಿರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ದೆಹಲಿ ಹಾಗೂ ಮುಂಬೈನಿಂದ ಆರೋಪಿಗಳು ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು.
ಬಂಧಿತರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸ್ಟಿಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಹೆಬ್ಬಗೋಡಿಯಲ್ಲಿ ವಾಸವಾಗಿದ್ದ ಆರೋಪಿಗಳು, ಡ್ರಗ್ಸ್ ಪಾರ್ಸಲ್ ಇಟ್ಟು ಲೋಕೇಶನ್ ಶೇರ್ ಮಾಡಿ ವ್ಯವಹಾರ ನಡೆಸುತ್ತಿದ್ದರು.