Belagavi NewsBelgaum NewsKannada NewsKarnataka NewsLatest
*ಬೆಳಗಾವಿ: ಪ್ರವಾಹದ ಅಬ್ಬರಕ್ಕೆ ಕೊಚ್ಚಿ ಹೋದ ನೂತನ ಸೇತುವೆ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷವಷ್ಟೇ ನಿರ್ಮಾಣವಗಿದ್ದ ಕೆಳಹಂತದ ಸೇತುವೆ ಭಾರಿ ಮಳೆ, ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿಯ ಕಾಗವಾಡದಲ್ಲಿ ನಡೆದಿದೆ.
ಕಾಗವಾಡದ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಗ್ರಾಣಿ ನದಿ ರಭಸಕ್ಕೆ ಸಂಬರಗಿ-ಆಜೂರ್ ಗ್ರಾಮಗಳ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ. 50 ಲಕ್ಷ ವೆಚ್ಚದಲ್ಲಿ ಕಳೆದ ವರ್ಷವಷ್ಟೇ ಈ ಸೇತುವೆ ನಿರ್ಮಿಸಲಾಗಿತ್ತು. ಇದೀಗ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳಪೆ ಕಾಮಗಾರಿಯೇ ಸೇತುವೆ ಕುಸಿದು ಬೀಳಲು ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.