Karnataka NewsLatestWorld

*ಆತ್ಮಾಹುತಿ ಬಾಂಬ್ ದಾಳಿ: ಮೂವರು ಯೋಧರು ಸೇರಿ 8 ಜನರು ಬಲಿ*

ಪ್ರಗತಿವಾಹಿನಿ ಸುದ್ದಿ: ಆತ್ಮಾಹುತಿ ಬಾಂಬ್ ದಾಳಿಗೆ ಮೂವರು ಯೋಧರು ಸೇರಿ 8 ಜನರು ಬಲಿಯಾಗಿರುವ ಘಟನೆ ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದಿದೆ.

ಆತ್ಮಾಹುತಿ ಬಾಂಬ್ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪಾಕ್ ಸೇನಾ ಕಚೇರಿ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಮೂವರು ಯೋಧರು ಸೇರಿ 8 ಜನರು ಮೃತಪಟ್ಟಿದ್ದಾರೆ. 19 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Home add -Advt

Related Articles

Back to top button