Belagavi NewsBelgaum NewsKarnataka NewsPolitics

*ಅ. 4ಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ; ಸಿದ್ದತೆ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ನಗರದ ಚನ್ನಮ್ಮ ವೃತ್ತದ ಪಕ್ಕದಲ್ಲಿ 188 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂನತ ಕಟ್ಟಡಕ್ಕೆ ಅ. 4ರಂದು ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿರುವ ಕಾರಣ ಮಂಗಳವಾರ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಿದ್ದತೆಗಳನ್ನು ಪರಿಶೀಲಿಸಿದರು.

ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಳವಡಿಸಿರುವ ಉಪಕರಣಗಳು ವೀಕ್ಷಿಸಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಬೆಳಗಾವಿ ಬಿಮ್ಸ್‌ನ ಹಿರಿಯ ಅಧಿಕಾರಿಗಳಿಂದ ಉಪಕರಣಗಳ ಕುರಿತು ಮಾಹಿತಿ ಪಡೆದರು.

ಅ. 4ರಂದು ನಡೆಯಲಿರುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಆಸೀಪ್‌ (ರಾಜು) ಸೇಠ್‌, ಬಾಬಾಸಾಬ್‌ ಪಾಟೀಲ್‌, ಜಿಲ್ಲಾಧಿಕಾರಿ ಮೊಹಮ್ಮದ್‌ ರೋಶನ್‌, ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ, ಉಪವಿಭಾಗಾಧಿಕಾರಿ ಶ್ರವಣ ನಾಯಿಕ, ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಸಿಂಧೆ, ಕೆಪಿಸಿಸಿ ಕಾರ್ಯದರ್ಶಿ ಸುನೀಲ್‌ ಹಣಮನ್ನವರ್‌ ಸೇರಿದಂತೆ ಬೆಳಗಾವಿ ಬಿಮ್ಸ್‌ನ ಹಿರಿಯ ಅಧಿಕಾರಿಗಳು ಇದ್ದರು.

Home add -Advt

Related Articles

Back to top button