
ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(83) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದು, ಚಿಕಿತ್ಸೆಯ ನಂತರ ಮಲ್ಲಿಕಾರ್ಜುನ ಖರ್ಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.
ಆರಂಭಿಕ ಚಿಕಿತ್ಸೆ ನೀಡಿ ಜನರಲ್ ವಾರ್ಡ್ ಗೆ ಶಿಪ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.