Kannada NewsKarnataka NewsLatestPolitics

*ಆಸ್ಪತ್ರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಉಸಿರಾಟದ ತೊಂದರೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ

ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ

Home add -Advt

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.
ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ
ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು.

ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.


Related Articles

Back to top button