
ಕಾರವಾರ: ಬಸ್, ಲಾರಿ, ಬೈಕ್, ಟೆಂಪೋ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದ ತಿನೈಘಾಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಬಸ್, ಲಾರಿ ಓವರ್ ಟೇಕ್ ಮಾಡಲು ಹೋಗಿ ಟೆಂಪೋಗೆ ಡಿಕ್ಕಿ ಹೊಡೆದು ಬೈಕ್ ಗೆ ಗುದ್ದಿದೆ. ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.