*ಪೋಕ್ಸ್ ಕೇಸ್ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ಐಗೆ ಇಲ್ಲ ಜಾಮೀನು*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟು ಲಾಕ್ ಆಗಿರು ಪಿಎಸ್ಐಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಬೆಂಗಳೂರಿನ ದೇವನಹಳ್ಳಿ ಠಾಣೆಯ ಪಿಎಸ್‌ಐ ಜಗದೇವಿ ಭೀಮಾಶಂಕರ್ ಸಲೋಟಗಿಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಮಗಳ ಮೇಲೆ ಜಾನ್ಸನ್ ಎಂಬ ವ್ಯಕ್ತಿಯ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಪಿಎಸ್‌ಐ, ಸಂತ್ರಸ್ತೆಯ ತಾಯಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆರೋಪಿ ಜಾನ್ಸನ್‌ನ್ನು ಕರೆತರಲು 25,000 ರೂ. ಲಂಚ ಪಡೆದಿದ್ದರು. ನಂತರ, ಪ್ರಕರಣದ ತನಿಖೆ ಪೂರ್ಣಗೊಳಿಸಲು 1,00,000 ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. 75,000 ರೂ.ಗಳಿಗೆ ಒಪ್ಪಿಕೊಂಡು 5,000 ರೂ. ಮುಂಗಡವಾಗಿ ಪಡೆದಿದ್ದರು.
ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆಯಲು ಮತ್ತು ಪುನಃ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ, ಸೆಪ್ಟೆಂಬರ್ 27ರಂದು ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಈ ನಿರ್ಧಾರವನ್ನು ಹೊರಡಿಸಿದ್ದಾರೆ.
ಅವರು, “ಪೋಕ್ಸ್ ಪ್ರಕರಣದಂತಹ ಸೂಕ್ಷ್ಮ ಪ್ರಕರಣದಲ್ಲಿ ಲಂಚ ಬೇಡಿಕೆ ಹಾಕುವುದು ಅಮಾನವೀಯ ಮತ್ತು ಕ್ಷಮಿಸಲು ಸಾಧ್ಯವಿಲ್ಲ” ಎಂದು ಟೀಕಿಸಿದ್ದಾರೆ.