
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್. ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಳ ಮಾಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಹಾಗೂ ದೀಪಾವಳಿಗೂ ಮುನ್ನವೇ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಪರಿಷ್ಕೃತ ಡಿಎ (ತುಟ್ಟಿಭತ್ಯೆ) ಜುಲೈ 1 ರಿಂದ ಜಾರಿಗೆ ಬರಲಿದೆ.