
ಪ್ರಗತಿವಾಹಿನಿ ಸುದ್ದಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಾಗರಿಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಕಳೆದ 72 ಗಂಟೆಗಳಿಂದ ನಡೆಸುತ್ತಿರ್ಯ್ವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ನಾಗರಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಸೇನೆ ಇಂಟರ್ ನೆಟ್ ಹಾಗೂ ಮಾರ್ಕೆಟ್ ಗಳನ್ನು ಬಂದ್ ಮಾಡಿದೆ. ಇದರಿಂದಾಗಿ ಇನ್ನಷ್ಟು ರೊಚ್ಚಿಗೆದ್ದಿರುವ ಜನರು ಬೀದಿ ಬೀದಿಗಳಲ್ಲಿ ಹೋರಾಟ ನಡೆಸಿದ್ದಾರೆ.
ಪಾಕ್ ಸೇನೆ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.