
ಪ್ರಗತಿವಾಹಿನಿ ಸುದ್ದಿ: ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಮಿಶ್ರಾ ಅವರ ಮಗಳು ನಮ್ರತಾ ಮಿಶ್ರಾ ತಿಳಿಸಿದ್ದಾರೆ.
ಕೆಲ ದಿನಗಳಿಂದ ಮಿಶ್ರಾ ತಮ್ಮ ಕಿರಿಯ ಮಗಳೊಂದಿಗೆ ಮಿರ್ಜಾಪುರದಲ್ಲಿ ವಾಸವಾಗಿದ್ದರು. ಛನ್ನುಲಾಲ್ ಮಿಶ್ರಾ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.