
ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವೇಳೆ ನೂಕು ನುಗ್ಗಲು ಉಂಟಾಗಿದ್ದು ಈ ವೇಳೆ ಮಹಿಳೆಯೊಬ್ಬರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಜಂಬೂಸವಾರಿ ಕೆ.ಆರ್.ಆಸ್ಪತ್ರೆ ಬಳಿ ಬರುತ್ತಿದ್ದಂತೆ ಅಂಬಾರಿಯಲ್ಲಿ ವಿರಾಜಮಾನವಾಗಿರುವ ತಾಯಿ ಚಾಮುಂಡಿ ದೇವಿಯನ್ನು ಕಣ್ತುಂಬಿಕೊಳ್ಳಲು ಜನಜಂಗುಳಿ ನೆರೆದಿದಿದೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಓರ್ವ ಮಹಿಳೆ ಅಸ್ವಸ್ಥರಾಗಿದ್ದಾರೆ.
ಕೂಡಲೇ ಅವರನ್ನು ಬ್ಯಾರಿಕೇಡ್ ನಿಂದ ಹೊರ ಕರೆತಂದ ಪೊಲೀಸರು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.