
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಓಟಿಸ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಶಿವರಾಮೇಗೌಡ ಹಾಗೂ ಶಾಸಕ ರಂಗನಾಥ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಂದು ವಾರದೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಮುಖ್ಯಸ್ಥ ರೆಹಮಾನ್ ಖಾನ್ ಸೂಚಿಸಿದ್ದಾರೆ.