
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಚಿನ್ನಯ್ಯ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ಯೂಟ್ಯೂಬರ್ ಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿದ್ದ ಐದಕ್ಕೂ ಹೆಚ್ಚು ಯೂಟ್ಯೂಬರ್ ಗಳಿಗೆ ಎಸ್ ಐಟಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.
ಯೂಟ್ಯೂಬರ್ ಸಮೀರ್ ಎಂ.ಡಿ.ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್ ಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.