
ಪ್ರಗತಿವಾಹಿನಿ ಸುದ್ದಿ: ಹೆತ್ತ ತಾಯಿಯೊಬ್ಬಳು 11 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶರವತಿನಗರದ ಜಿಲ್ಲಾಸ್ಪತ್ರೆ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದೆ. 36 ವರ್ಷದ ಶೃತಿ ಎಂಬ ಮಹಿಳೆ ತನ್ನ ಮಗಳಾದ 11 ವರ್ಷದ ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾಳೆ. ಬಳಿಕ ತಾನೂ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.