LatestNational

*ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಪೂರ್ಣಿಯಾದಲ್ಲಿ ಈ ದುರಂತ ಸಂಭವಿಸಿದೆ. ಮೇಳವೊಂದರಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದ ನಾಲ್ವರಿಗೆ ರೈಲು ಡಿಕ್ಕಿ ಹೊಡೆದಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿತ್ತು. ಪೂರ್ಣಿಯಾ ಪಟ್ಟಣದ ಬಳಿ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

Related Articles

Back to top button