Kannada NewsKarnataka NewsLatest
*ಸ್ಕಿಡ್ ಆಗಿ ಬಿದ್ದ ಬೈಕ್: ಕೆಳಗೆ ಬಿದ್ದ ಯುವತಿಯರ ಮೇಲೆ ಹರಿದ ಕ್ಯಾಂಟರ್: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದ ಇಬ್ಬರು ಯುವತಿಯರ ಮೇಲೆ ಕ್ಯಾಂಟರ್ ವಾಹನ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೈಲಾ ಹಾಗೂ ಶ್ವೇತಾ ಮೃತ ಯುವತಿಯರು. ಅತಿವಟ್ಟ ಗ್ರಾಮದ ನಿವಾಸಿಗಳು.
ರಸ್ತೆ ಕಾಮಗಾರಿಗೆ ಜಲ್ಲಿಕಲ್ಲು ಹಾಕಿದ್ದರಿಂದ ಬೈಕ್ ಸ್ಕಿಡ್ ಆಗಿ ಇಬ್ಬರು ಯುವತಿಯರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಂದ ಕ್ಯಾಂಟರ್ ಯುವತಿಯರ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಹೊಸಕೋಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.