Belagavi NewsBelgaum NewsKarnataka NewsLatest

*ಬೆಳಗಾವಿ: ಕಲ್ಲುತೂರಾಟ ಪ್ರಕರಣ: 50 ಜನರ ವಿರುದ್ಧ FIR ದಾಖಲು; 11 ಜನರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಉರುಸ್ ಮೆರವಣಿಗೆ ವೇಳೆ ಐ ಲವ್ ಮೊಹಮ್ಮದ್ ಘೋಷಣೆ ಕೂಗಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಖಡಕ್ ಗಲ್ಲಿಯ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ 10 ಜನರ ಹೆಸರು ಉಲ್ಲೇಖಿಸಿ ಒಟ್ಟು 50 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಈಗಾಗಲೇ 11 ಜನರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬೆಳಗಾವಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Home add -Advt


Related Articles

Back to top button