
ಪ್ರಗತಿವಾಹಿನಿ ಸುದ್ದಿ: ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಇದೀಗ ಬಾಯಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಧನ್ಯಾ ಬಾಯಿ (13) ಹಾಗೂ ಚೈತ್ರಾಬಾಯಿ (13)ಮೃತ ಬಾಲಕಿಯರು.
ಮನೆ ಮುಂದೆಯೇ ಆಟವಾಡುತ್ತಿದ್ದ ಇಬ್ಬರೂ ಬಾಲಕಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬದವರು ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರು. ಇದೀಗ ಬಾಲಕಿಯರು ಕುಂಪಪಾಳ್ಯ ಬಳಿಯ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬಾಲಕಿಯರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.