
ಪ್ರಗತಿವಾಹಿನಿ ಸುದ್ದಿ: ಕೆಮ್ಮಿಗೆ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ನಡೆದಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬೆನ್ನಲ್ಲೇ ಮಕ್ಕಳಿಗೆ ಸಿರಪ್ ನೀಡಿದ್ದ ವೈದ್ಯನನ್ನು ಬಂಧಿಸಲಾಗಿದೆ.
ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವೈದ್ಯನನ್ನು ಬಂಧಿಸಲಾಗಿದೆ
ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈ ನಡುವೆ ಎರಡುವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆ ಸಿರಪ್ ನೀಡದಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.