Kannada NewsKarnataka NewsLatest
*ಲೋಕಾಯುಕ್ತ ಹೆಸರಲ್ಲಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಡಿವೈಎಸ್ ಪಿ ಹೆಸರಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆಯೊಡ್ಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಐಜೂರು ಠಾಣೆ ಪೊಲೀಸರು ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಿದ್ದು, ಬಂಧಿತನನ್ನು ಮುರೆಗಪ್ಪ ಎಂದು ಗುರುತಿಸಲಾಗಿದೆ. ಆರೋಪಿ ಮುರಗೆಪ್ಪ ಮಾಗಡಿ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗೆ ಕರೆ ಮಾಡಿ ತಾನು ಲೋಕಾಯುಕ್ತ ಡಿವೈ ಎಸ್ ಪಿ ಎಂದು ಹೇಳಿ ನಿಮ್ಮ ವಿರುದ್ಧ ಕೇಸ್ ದಾಖಲಾಗಿದ್ದು, ನಿಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಇದೀಗ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.