
ಪ್ರಗತಿವಾಹಿನಿ ಸುದ್ದಿ: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ಸಂಭವಿಸಿ 8 ಜನರು ಸಜೀವದಹನಗೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಎರಡು ಐಸಿಯುಗಳಿದ್ದವು. ಬೆಂಕಿ ಅವಘಡ ಸಂಭವಿಸಿದಾಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿ 8 ಜನರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




