Kannada NewsKarnataka NewsLatest
*ಮಕ್ಕಳು ಆಟವಾಡುತ್ತಿದ್ದ ವೇಳೆ ದುರಂತ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಬಳಿ ಆಟವಾಡುತ್ತಿದ್ದ ಮಕ್ಕಳು ನೀರಿನ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಪ್ರಣವ್ (7) ಹಾಗೂ ನಿಶಾಂತ್ (5) ಮೃತ ಬಾಲಕರು. ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರೂ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರಿನಲ್ಲಿ ಈ ಘಟನೆ ನಡೆದಿದೆ.
ಬಾಲಕರ ಪೋಷಕರು ಐಬಿಸಿ ಕಾಫಿ ಎಸ್ಟೇಟ್ ನಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಈ ದುರಂತ ಸಂಭವಿಸಿದೆ.